ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ವಿಸ್ತರಣೆ…

81
firstsuddi

ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.

ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಅಫ್ತಾಬ್ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಸಾಕೇತ್ ಜಿಲ್ಲಾ ನ್ಯಾಯಲಯದ ಮುಂದೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಮುಂದಿನ 14 ದಿನಗಳವರೆಗೆ ನ್ಯಾಯಂಗ ಬಂಧನವನ್ನು ವಿಸ್ತರಣೆ ಮಾಡಿತು.

ಅಫ್ತಾಬ್ ಬುದ್ಧಿವಂತ ಯುವಕನಾಗಿದ್ದು ತನಿಖೆಯಲ್ಲಿ ಪೊಲೀಸರು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾನೆ. ಆಗಾಗ್ಗೆ ಹೇಳಿಕೆ ಬದಲಿಸುತ್ತಾನೆ ಮತ್ತು ಹೊಸ ಮಾಹಿತಿಯನ್ನು ನೀಡುತ್ತಿದ್ದಾನೆ ಇವುಗಳ ಆಧಾರದ ಮೇಲೆ ತನಿಖೆ ನಡೆಸಬೇಕಿದೆ. ತನಿಖೆಯ ದೃಷ್ಟಿಯಿಂದ ಅಫ್ತಾಬ್ ಅವಶ್ಯಕತೆ ಇದೆ ಎಂದು ದೆಹಲಿ ಪೊಲೀಸರ ಪರ ವಕೀಲರು ವಾದ ಮಂಡಿಸಿದರು. ವಾದ ಆಲಿಸಿದ ಸಾಕೇತ್ ಕೋರ್ಟ್ ನ್ಯಾಯಾಂಗ ಬಂಧನವನ್ನು ವಿಸ್ತರಿಸಿತು.

ಅಫ್ತಾಬ್ ಪೂನವಾಲಾ ದೆಹಲಿಯ ಬಾಡಿಗೆ ಅಪಾರ್ಟ್ಮೆಂಟ್ ನಲ್ಲಿ ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾಳನ್ನು ಕೊಂದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿರಿಸಿ ನಂತರ ಮೃತ ದೇಹದ ಭಾಗಗಳನ್ನು ರಾಷ್ಟ್ರ ರಾಜಧಾನಿಯಾದ್ಯಂತ ವಿವಿಧ ಸ್ಥಳಗಳಲ್ಲಿ ಎಸೆದಿದ್ದ.