ಬೆಂಗಳೂರು : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ತಮ್ಮ ಸ್ವಂತ ಹಣದಲ್ಲಿ ವಿಶ್ವದಲ್ಲಿಯೇ ಅತೀ ಎತ್ತರವಾದ ಯೇಸುವಿನ ಪ್ರತಿಮೆಯನ್ನು ನಿರ್ಮಿಸಲು ಮುಂದಾಗಿದ್ದು, ಇದಕ್ಕೆ ಶಿಲಾನ್ಯಾಸ ಕೂಡಾ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಟ್ವಿಟರ್ ಮೂಲಕ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ವಂಗ್ಯವಾಡಿದ್ದು, “ನಮ್ಮ ಪವಿತ್ರ ದೇಶದಲ್ಲೇ ಹುಟ್ಟಿದ ಪ್ರಭು ಶ್ರೀ ರಾಮನ ಭವ್ಯ ಮಂದಿರ ನಿರ್ಮಾಣ ವಿರೋಧಿಸಿದ್ದ ಕಾಂಗ್ರೆಸ್ ನವರು, ತಮ್ಮ ನಾಯಕಿಯನ್ನು ಮೆಚ್ಚಿಸಲು ತಮ್ಮದೇ ಹಣದಲ್ಲಿ ವ್ಯಾಟಿಕನ್ ನಲ್ಲಿ ಹುಟ್ಟಿದ ಯೇಸುವಿನ ಪ್ರತಿಮೆ ನಿರ್ಮಿಸಲು ಹೊರಟಿದ್ದಾರೆ. ಇನ್ನು ಇವರು ಕೆಪಿಸಿಸಿ ಅಧ್ಯಕ್ಷರಾಗುವುದನ್ನು ತಪ್ಪಿಸಲು ಸ್ವತಃ ಸಿದ್ದರಾಮಯ್ಯನವರಿಗೂ ಆಗುವುದಿಲ್ಲ.” ಎಂದು ಟ್ವೀಟ್ ಮಾಡಿದ್ದಾರೆ.











