ಶ್ರೀಶೈಲದಲ್ಲಿ ಕರ್ನಾಟಕದ ಸರ್ಕಾರಿ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ…

56
firstsuddi

ವಿಜಯಪುರ : ಆಂಧ್ರಪ್ರದೇಶದ ಸುಕ್ಷೇತ್ರ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ನಡೆದಿರುವುದು ಬೆಳಕಿಗೆ ಬಂದಿದೆ. ಕರ್ನಾಟಕದ ಸರ್ಕಾರಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಕೆಎಸ್ಆರ್​ಟಿಸಿ ಬಸ್ ಚಾಲಕ ಬಸವರಾಜ್ ಬಿರಾದಾರ್ ಹಾಗೂ ನಿರ್ವಾಹಕ ಜೆಡಿ ಮಾದರ್ ಮೆಲೆ ಹಲ್ಲೆ ನಡೆಸಲಾಗಿದೆ. ವಿಜಯಪುರ ಡಿಪೋಗೆ ಸೇರಿದ ಬಸ್ ಕಿಟಕಿ ಗಾಜು ಒಡೆಯಲಾಗಿದೆ. ಜೂನ್ 2ರಂದು ಈ ಘಟನೆ ನಡೆದಿದೆ.

ಜೂನ್ 2 ರ ಮಧ್ಯರಾತ್ರಿ ಬಸ್ ಚಾಲಕ ಬಸವರಾಜ್ ಬಿರಾದಾರ್ ಶ್ರೀಶೈಲ ಬಸ್ ನಿಲ್ದಾಣದ ಬಳಿ ವಾಹನ ನಿಲ್ಲಿಸಿದ್ದಾರೆ. ಬಳಿಕ ಊಟ ಮಾಡಿ ಕಟ್ಟೆಯ ಮೇಲೆ ಮಲಗಿದ್ದಾಗ ಏಕಾಏಕಿ ಬಂದ ಪುಂಡರ ಗುಂಪು ಹಲ್ಲೆ ಮಾಡಿದೆ. ಈ ವೇಳೆ 10-12 ಜನರ ಪುಂಡರ ಗುಂಪು ಕನ್ನಡಿಗರ ಬಗ್ಗೆ ಅಶ್ಲೀಲ ಪದ ಬಳಸಿ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಚಾಲಕ ಬಸವರಾಜ್ ಚೀರಾಟ ಕೇಳಿ ಇತರೆ ಚಾಲಕರು ಹಾಗೂ ನಿರ್ವಾಹಕರು ಬರುತ್ತಿದ್ದಂತೆ ದುಷ್ಕರ್ಮಿಗಳು ಪಲಾಯನವಾಗಿದ್ದಾರೆ. ಚಾಲಕನ ಮುಖ ಹಾಗೂ ಕಾಲಿನ ಭಾಗಕ್ಕೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಶ್ರೀಶೈಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಿದೆ.

ಮಾರ್ಚ್ 31ರ ಯುಗಾದಿ ಸಂದರ್ಭದಲ್ಲಿ ನೀರಿಗಾಗಿ ಕನ್ನಡಿಗರ ಮೇಲೆ ಹಲ್ಲೆಯಾಗಿತ್ತು.