ಬೆಂಗಳೂರು : ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ನಾಯಕರು,ಅಭಿಮಾನಿಗಳು ಸೇರಿದಂತೆ ಇಡೀ ಚಿತ್ರರಂಗವೇ ಕಂಬನಿ ಮಿಡಿದಿದೆ. ಜೊತೆಗೆ ಅಮೆರಿಕದ ರಾಯಭಾರ ಕಚೇರಿ ಕೂಡ ಸಂತಾಪ ಸೂಚಿಸಿದೆ. ಅದರಲ್ಲೂ ಕನ್ನಡಲ್ಲಿಯೇ ಸಂತಾಪ ಸೂಚಿಸಿರುವುದು ವಿಶೇಷವಾಗಿದೆ.
ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್ ಖಾತೆ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ ‘ಪ್ರೈಡ್’ ತಿಂಗಳ ಆಚರಣೆಯ ಅಂಗವಾಗಿ ಐಉಃಖಿಕಿi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ…ಅವಳು’ ಪ್ರದರ್ಶನ ಸಂವಾದದಲ್ಲಿ ಭಾಗಿಯಾಗಿದ್ದ ಸಂಚಾರಿ ವಿಜಯ್. ಆರ್ ಐಪಿ ವಿಜಯ್ ಎಂದು ಎಂದು ಟ್ವೀಟ್ ಮಾಡಿದೆ.
ರಾಷ್ಟ್ರ ಪ್ರಶಸ್ತಿ ವಿಜೇತ #SanchariVijay ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ “ನಾನು ಅವನಲ್ಲ…ಅವಳು” ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದ ಸಂಚಾರಿ ವಿಜಯ್. #RIP
— US Consulate Chennai (@USAndChennai) June 15, 2021
ಇನ್ನೂ ಯೂಸ್ ಆ್ಯಂಡ್ ಚೆನ್ನೈ ಟ್ವಿಟ್ಟರ್ ಖಾತೆಯಿಂದ ಈ ರೀತಿ ಟ್ವೀಟ್ ಬರುತ್ತಿದ್ದಂತೆಯೇ ಅನೇಕ ಮಂದಿ ರಿಟ್ವೀಟ್ ಮಾಡಿದ್ದಾರೆ. ಕೆಲವರು ನಮ್ಮ ದೇಶದವರೇ ಹೀಗೆ ಸಾಮಾನ್ಯ ಜನರಿಗೆ ಅರ್ಥ ಆಗುವ ರೀತಿಯಲ್ಲಿ ಹಾಕಲ್ಲ. ಆದರೆ ನೀವು ಕನ್ನಡದ ನಟನಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವುದಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.










