‘ಸಂಜು ವೆಡ್ಸ್ ಗೀತಾ 2’ ಸಿನಿಮಾಗೆ ರಚಿತಾ ರಾಮ್ ನಾಯಕಿ?

66
firstsuddi

2011ರಲ್ಲಿ ತೆರೆಕಂಡ ‘ಸಂಜು ವೆಡ್ಸ್ ಗೀತಾ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಈ ಸಿನಿಮಾದ ಪಾರ್ಟ್ 2 ಅನ್ನು ನಿರ್ದೇಶಕ ನಾಗಶೇಖರ್ ಮತ್ತೆ ಕೈಗೆತ್ತಿಕೊಂಡಿದ್ದಾರೆ. ಶ್ರೀನಗರ ಕಿಟ್ಟಿ ಮತ್ತು ರಮ್ಯಾ ಕಾಂಬಿನೇಷನ್ ನ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹಿಟ್ ಆಗಿತ್ತು. ಇದೀಗ ಸಂಜು ವೆಡ್ಸ್ ಗೀತಾ 2 ಸಿನಿಮಾ ಸೆಟ್ಟೇರಲು ರೆಡಿಯಾಗಿದ್ದು, ನಾಯಕಿ ಯಾರು ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.

ನಟಿ ರಚಿತಾ ರಾಮ್ ಅವರ ಜೊತೆ ‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡದವರು ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಚಿತಾ ಜೊತೆ ಒಂದು ಸುತ್ತಿನ ಮಾತುಕತೆ ಕೂಡ ಆಗಿದೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ನಾಗಶೇಖರ್ ಅವರು ತಮ್ಮ ನಾಗಶೇಖರ್ ಮೂವೀಸ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಯೋಜನೆಯನ್ನು ನಿರ್ಮಿಸಲಿದ್ದಾರೆ ಮತ್ತು ಈ ಚಿತ್ರವನ್ನು 2024ರ ದಸರಾ ಸಂದರ್ಭದಲ್ಲಿ ಬಿಡುಗಡೆ ಮಾಡಲು ಯೋಜಿಸಿದ್ದಾರೆ.

ನಟಿ ರಚಿತಾ ರಾಮ್ ಅವರ ಕೈಯಲ್ಲಿ ಅನೇಕ ಪ್ರಾಜೆಕ್ಟ್​ಗಳಿವೆ. ‘ಶಬರಿ’, ‘ಮ್ಯಾಟ್ನಿ’, ‘ಲವ್ ಮಿ ಆರ್ ಹೇಟ್ ಮಿ’ ಮುಂತಾದ ಸಿನಿಮಾಗಳಿಗೆ ಅವರು ನಾಯಕಿ ಆಗಿದ್ದಾರೆ. ‘ಅಯೋಗ್ಯ’ ಚಿತ್ರದ ಬಳಿಕ ಸತೀಶ್ ‘ನೀನಾಸಂ’ ಮತ್ತು ರಚಿತಾ ರಾಮ್ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸುತ್ತಿರುವುದು ವಿಶೇಷ. ಈ ಚಿತ್ರದ ಮೊದಲ ಹಾಡು ಜುಲೈ 21ರಂದು ಬಿಡುಗಡೆ ಆಗಲಿದೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ರಚಿತಾ ರಾಮ್​ಗೆ ಬೇಡಿಕೆ ಇದೆ. ‘ಭರ್ಜರಿ ಬ್ಯಾಚುಲರ್’ ರಿಯಾಲಿಟಿ ಶೋನಲ್ಲಿ ಅವರು ಜಡ್ಜ್ ಆಗಿ ಭಾಗವಹಿಸುತ್ತಿದ್ದಾರೆ.