ಸಂಸದ ಡಾ. ಉಮೇಶ್ ಜಾಧವ್ ಹಾಗೂ ಅವರ ಮಗ ಶಾಸಕ ಡಾ. ಅವಿನಾಶ್ ಅವರಿಗೆ ಕೊರೊನಾ ಪಾಸಿಟಿವ್…

139
firstsuddi

ಕಲಬುರಗಿ : ಸಂಸದ ಡಾ. ಉಮೇಶ್ ಜಾಧವ್ ಹಾಗೂ ಅವರ ಮಗ ಶಾಸಕ ಡಾ. ಅವಿನಾಶ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸಂಸದ ಡಾ. ಉಮೇಶ್ ಜಾಧವ್ ಹಾಗೂ ಚಿಂಚೋಳಿ ಕ್ಷೇತ್ರದ ಶಾಸಕ ಡಾ. ಅವಿನಾಶ್ ಅವರಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆ, ಇಬ್ಬರಿಗೂ ಕೊರೊನಾ ಪರೀಕ್ಷೆ ಮಾಡಿಸಲಾಗಿತ್ತು. ವರದಿಯಲ್ಲಿ ಇಬ್ಬರಿಗೂ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.