ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತ ಯೋಧನ ಅಂತ್ಯಕ್ರಿಯೆ…

181
firstsuddi

ಬೆಳಗಾವಿ : ಅನಾರೋಗ್ಯದಿಂದ ಮೃತಪಟ್ಟಿದ್ದ ಕರ್ತವ್ಯ ನಿರತ ಯೋಧನ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಮಂಗಸೋಳಿ ಗ್ರಾಮದಲ್ಲಿ ನೆರವೇರಿಸಲಾಯಿತು. ಕಳೆದ 17 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿ ಸಲ್ಲಿಸುತ್ತಿದ್ದ ವೀರಯೋಧ ಸುನೀಲ್ ಖಿಲಾರಿ(35) ಅಸ್ಸಾಂ ಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಗುಹಾವಟಿಯ ಆರ್ಮಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಯೋಧನ ಪಾರ್ಥೀವ ಶರೀರ ಇಂದು ತಮ್ಮ ಸ್ವಗ್ರಾಮವಾದ ಮಂಗಸೋಳಿ ಗ್ರಾಮಕ್ಕೆ ತಲುಪಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.