ನವದೆಹಲಿ : ಕೊರೊನಾ ಸೋಂಕಿನಿಂದ ಮೃತಪಟ್ಟ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ದೆಹಲಿಯ ಲೋದಿ ರಸ್ತೆಯಲ್ಲಿರುವ ಚಿತಾಗಾರದಲ್ಲಿ ನೆರವೇರಿಸಲಾಯಿತು. ಪ್ರಣಬ್ ಮುಖರ್ಜಿ ಅವರ ಕುಟುಂಬ ಸದಸ್ಯರು ಹಾಗೂ ಸಂಬಂಧಿಕರು ಪಿಪಿಇ ಕಿಟ್ ಧರಿಸಿಕೊಂಡು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಸಕಲ ಸರ್ಕಾರಿ ಮತ್ತು ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಗಿದ್ದು, ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಅವರು ತಮ್ಮ ತಂದೆಯ ಅಂತಿಮ ವಿಧಿ ವಿಧಾನವನ್ನು ನಡೆಸಿದರು.










