ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕೊರೊನಾ ಸೋಂಕು…

93
firstsuddi

ಉಡುಪಿ : ರಾಜ್ಯದ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೋಟ ಶ್ರೀನಿವಾಸ ಪೂಜಾರಿಯವರು, ಕೊರೊನಾ ಪಾಸಿಟಿವ್ ಹಿನ್ನಲೆ ಆಸ್ಪತ್ರೆ ಗೆ ದಾಖಲಾಗಿದ್ದೇನೆ. ಅನಿರ್ವಾಯವಾದರೆ ಕರೆ ಮಾಡಿ ಸಂಪರ್ಕಿಸಬಹುದು. ನನ್ನ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕಳೆದ ಮಾರ್ಚ್. 29 ರಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಕೋವಿಡ್ ಮೊದಲ ಹಂತದ ಲಸಿಕೆಯನ್ನು ಪಡೆದಿದ್ದರು.