ಕಲಬುರಗಿ: ಬೀದರ್‍ನಲ್ಲಿ ಗುತ್ತಿಗೆದಾರ ಸಚಿನ್ ಬರೆದ ಡೆತ್‍ನೋಟ್‍ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿದೆ ಎಂದು ಬಿಜೆಪಿ ಆರೋಪಿಸಿದೆ. ಸಾವಿಗೆ ಸಚಿವರೇ ಕಾರಣ ಎಂದು ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನಿಸಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು, ಪ್ರತಿಭಟನಾಕಾರನ್ನು ತಡೆಯಲಾಯಿತು. ಇದೇ ವೇಳೆ ನೂಕಾಟ, ತಳ್ಳಾಟವೂ ನಡೆದಿದೆ. 2 ದಿನದ ಹಿಂದೆ ಅಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಪ್ರತಿಭಟನೆ ಮಾಡಲಿ. ಒಳ್ಳೆ ರೀತಿಯಲ್ಲಿ ಆತಿಥ್ಯ ಕೊಡುತ್ತೇನೆ ಎಂದು ಹೇಳಿದ್ದರು. ಇದೀಗ ಅದರಂತೆಯೇ ಮುತ್ತಿಗೆ ಹಾಕಲು ಬಂದ ಬಿಜೆಪಿ ನಾಯಕರಿಗೆ ಕಾಫಿ, ಟೀ, ಎಳನೀರಿನ ವ್ಯವಸ್ಥೆ ಮಾಡಲಾಗಿತ್ತು. ಕಲಬುರಗಿಯಲ್ಲಿ ಪ್ರಿಯಾಂಕ್ ವಿರುದ್ಧ ಪ್ರತಿಭಟನೆ ನಡೆದರೆ, ಮಂಡ್ಯದಲ್ಲಿ ಪರವಾಗಿ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಿ.ಟಿ ರವಿ ಅವರ ಫೋಟೋಗೆ ಮಸಿ ಬಳಿಯುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿ ಆಗುವಂತೆ ಸಂತ್ರಸ್ತರ ಕುಟುಂಬಸ್ಥರಿಗೆ ಬಿಜೆಪಿ ಒತ್ತಡ ಹಾಕಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ತಮ್ಮ ವಿರುದ್ಧವಾಗಿ ಹೇಳಿಕೆ ಕೊಡುವಂತೆಯೂ ಬಿಜೆಪಿಯವರು ಒತ್ತಡ ಹೇರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.










