ಬೆಂಗಳೂರು : ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರ ಟ್ವಿಟ್ಟರ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದು, ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡುವುದಾಗಿ ಸಚಿವರು ತಿಳಿಸಿದ್ದಾರೆ.
ನನ್ನ ಟ್ವಿಟ್ಟರ್ ಖಾತೆ @NiraniMurugesh ಯನ್ನು ಕೆಲವರು ಇಂದು ಅಜ್ಞಾತ ವಿದೇಶಿ ಸ್ಥಳದಿಂದ ಹ್ಯಾಕ್ ಮಾಡಲಾಗಿದೆ. ಆರೋಪಿಗಳ ನಿಖರವಾದ ಮೂಲ ಮತ್ತು ಗುರುತು ನಮಗೆ ತಿಳಿದಿಲ್ಲ. ಹ್ಯಾಕರ್ ಗಳು ಪೋಸ್ಟ್ ಮಾಡುವ ಯಾವುದೇ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ. ನನ್ನ ಖಾತೆಯಲ್ಲಿರುವ ಯಾವುದೇ ಅವಹೇಳನಕಾರಿ ಮತ್ತು ಅಸಂಸದೀಯ ಸಂದೇಶಗಳನ್ನು ನಿರ್ಲಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಈ ಹಿಂದೆಯು ಇದೇ ರೀತಿ ಕೆಲವು ದುಷ್ಕರ್ಮಿಗಳು ನನ್ನ ಫೇಸ್ ಬುಕ್ ಹ್ಯಾಕ್ ಮಾಡಿದ್ದರು ಎಂದು ಮುರುಗೇಶ್ ಆರ್ ನಿರಾಣಿ ಅವರು ತಿಳಿಸಿದ್ದಾರೆ.










