ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ…

81
firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಪುತ್ರ ಬಿ. ವೈ. ವಿಜಯೇಂದ್ರ ಹೆಸರೇಳಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಅವರ ಬಂಧನವಾಗಿದೆ.

ಈ ಬಗ್ಗೆ ಸ್ವತಃ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಜನರಿಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ, ಅಲ್ಲದೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂದು ಸಚಿವ ಶ್ರೀರಾಮುಲು ಅವರ ಪಿಎ ರಾಜು ವಿರುದ್ಧ ಸಿಸಿಬಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಸಾಕ್ಷಿಗಳನ್ನು ಕಲೆ ಹಾಕಿದ ಸಿಸಿಬಿ ಪೊಲೀಸರು ನಿನ್ನೆ ಸಂಜೆ ಸಚಿವ ಶ್ರೀರಾಮುಲು ಮನೆಯ ಬಳಿಯೇ ರಾಜು ಅವರನ್ನು ಅರೆಸ್ಟ್ ಮಾಡಿದ್ದಾರೆ.

ಇನ್ನೂ ಆರೋಪ ಸಂಬಂಧ ರಾಜಣ್ಣ ಅವರನ್ನು ಬಂಧಿಸಿರುವ ಸಿಸಿಬಿ ಪೊಲಿಸರು ಆಡುಗೋಡಿ ಟೆಕ್ನಿಕಲ್ ಸೆಂಟರ್ ನಲ್ಲಿ ವಿಚಾರಣೆ ನಡೆಸುತ್ತಿದ್ದು, ಇಂದು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.