ಸಚಿವ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಸಲಹೆ ಪಡೆದು ಮುಂದಿನ ಕ್ರಮ : ಸಿಎಂ.

72
firstsuddi

ಹುಬ್ಬಳ್ಳಿ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಮ್ಮ ಮುಂದೆ ವಿಧಾನ ಪರಿಷತ್ ಚುನಾವಣೆ ಹಾಗೂ ಬೆಳಗಾವಿ ಅಧಿವೇಶನವಿದೆ. ಈ ಬಗ್ಗೆ ವರಿಷ್ಠರ ಸಲಹೆಯಂತೆ ನಿರ್ಧರಿಸಲಾಗುವುದು. ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಲುವಿನ ಬಗ್ಗೆ ಜೆಡಿಎಸ್ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಅವರೇ ಹೇಳಬೇಕು ಎಂದರು.

ಒಮಿಕ್ರಾನ್ ರೂಪಾಂತರ ತಳಿ ಪತ್ತೆ ಹಿನ್ನೆಲೆಯಲ್ಲಿ ಮಾಲ್ ಮತ್ತು ಚಿತ್ರಮಂದಿರಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಅವಕಾಶ ಕಲ್ಪಿಸಬೇಕೆಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲ ಸಲಹೆಗಳನ್ನು ತಜ್ಞರ ಸಮಿತಿ ಮುಂದಿಟ್ಟು ಅವರ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಎಂದು ಮಾಹಿತಿ ನೀಡಿದರು.

ಬಿಜೆಪಿ ಸೇರದ ಕಾರಣ ನನ್ನನ್ನು ಜೈಲಿಗೆ ಕಳುಹಿಸಿದರು ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಎಲ್ಲಾ ಹೇಳಿಕೆಗಳಿಗೆ ನಾನು ಉತ್ತರ ನೀಡಬೇಕಿಲ್ಲ ಎಂದರು.