ಸಚಿವ ಸಂಪುಟ ವಿಸ್ತರಣೆ ವಿಳಂಬ ಆಗುತ್ತಿರುವುದಕ್ಕೆ ಸ್ಪಷ್ಟನೆ ನೀಡಿದ ಎನ್. ರವಿಕುಮಾರ್…

298
firstsuddi

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮೈತ್ರಿ ಸರ್ಕಾರದ ರೀತಿಯಲ್ಲಿ ನಾವು ಸರ್ಕಾರವನ್ನು ನಡೆಸದೇ ಉತ್ತಮವಾಗಿ ಸರ್ಕಾರ ನಡೆಸಬೇಕು ಹಾಗೂ ಉತ್ತಮ ಸಚಿವ ಸಂಪುಟವನ್ನು ರಚಿಸಬೇಕು ಎಂಬ ಕಾರಣಕ್ಕೆ ಸಂಪುಟ ರಚನೆ ವಿಳಂಬವಾಗುತ್ತಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಆಗಸ್ಟ್ 5ರಂದು ದೆಹಲಿಗೆ ತೆರಳಲಿದ್ದಾರೆ. ಬಳಿಕ ಹೈಕಮಾಂಡ್ ಜೊತೆಗೆ ಚರ್ಚಿಸಿ ಬೆಂಗಳೂರಿಗೆ ಬಂದ ನಂತರ ಸಚಿವ ಸಂಪುಟ ರಚಿಸಲಾಗುತ್ತದೆ. ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಕೆ.ಎಸ್. ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್ ಅವರ ಜೊತೆ ಸಿಎಂ ಯಡಿಯೂರಪ್ಪ ಅವರು ಚರ್ಚಿಸಿ ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎಂಬ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ. ದೇಶವ್ಯಾಪಿ ಬಿಜೆಪಿ ಸದಸ್ಯತ್ವ ನೊಂದಾಣಿ ನಡೆಯುತ್ತಿದ್ದು, 50ಲಕ್ಷ ಸದಸ್ಯತ್ವ ನೊಂದಾಣಿ ಮಾಡುವ ಗುರಿಯನ್ನು ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದರು.