ಸಮಾಜ ಕಲ್ಯಾಣ ಇಲಾಖೆಯಿಂದ ಕಲ್ಯಾಣ ಮಿತ್ರ ಏಕೀಕೃತ ಸಹಾಯವಾಣಿ ಆರಂಭ…

67
firstsuddi

ಬೆಂಗಳೂರು : ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಏಕೀಕೃತ ಎಸ್​​ಸಿ-ಎಸ್​​ಟಿ 24×7 ಸಹಾಯವಾಣಿ (9482300400)ಯನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಎನ್ ರವಿಕುಮಾರ್, ವೈ. ಎ. ನಾರಾಯಣಸ್ವಾಮಿ, ಅ.ದೇವೇಗೌಡ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್ ನಾಗೇಶ, ರಾಮಣ್ಣ ಲಮಾಣಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಲ್ಯಾಣ ಮಿತ್ರ ಸಹಾಯವಾಣಿ ದಿನದ 24 ಗಂಟೆ ವಾರದ ಏಳು ದಿನಗಳು ಕಾರ್ಯ ನಿರ್ವಹಿಸಲಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ ಇಲಾಖೆಗಳು ಒಳಗೊಂಡ ಸಹಾಯವಾಣಿ ಇದಾಗಿದೆ. ಈ ಸಹಾಯವಾಣಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಹಾಗೂ ಇಲಾಖೆಯ ಯಾವುದೇ ಸಮಸ್ಯೆಗಳಿಗೆ ಸಹಾಯವಾಣಿಗೆ ಕರೆ ಮಾಡಿ ಪರಿಹಾರ ಮಾಡಿಕೊಳ್ಳಬಹುದಾಗಿದೆ.