ಸಮಾಜ ಸೇವೆಗೆ ಹೆಸರಾಗಿದ್ದ ಕಾಪುವಿನ ಲೀಲಾಧರ ಶೆಟ್ಟಿ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ…

62
firstsuddi

ಉಡುಪಿ: ಸಮಾಜ ಸೇವೆ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಕಾಪು ತಾಲೂಕಿನಾದ್ಯಂತ ಭಾರೀ ಹೆಸರು ಗಳಿಸಿದ್ದ ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.

ಪ್ರಾಥಮಿಕ ಮೂಲಗಳ ಪ್ರಕಾರ, ಕೌಟುಂಬಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಮ್ಯ ಸ್ವಭಾವದವರಾಗಿದ್ದ ಲೀಲಾಧರ ಶೆಟ್ಟಿಯವರು ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸಹ ಸ್ಪರ್ಧಿಸಿದ್ದರು. ಸದಾ ಸಮಾಜಪರ ಕಾಳಜಿ ಹೊಂದಿದ್ದ ಅವರು ಯಾವುದೇ ಕ್ಷಣದಲ್ಲಿ ಕೂಡ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಆದರೂ ಇತ್ತೀಚೆಗೆ ಹಣಕಾಸಿನ ತೊಂದರೆ ಕೂಡ ಹೊಂದಿದ್ದರು ಎನ್ನಲಾಗಿದೆ.

ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.