ಸರಣಿ ಅಪಘಾತ – ಒಂದೇ ಕುಟುಂಬದ ಐವರು ದುರ್ಮರಣ…

40
firstsuddi

ಚೆನ್ನೈ : ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ- ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಕಾಂಚಿಪುರಂನ ವಿಜಯರಾಘನ್ ಎಂಬವರು ತಮ್ಮ ಕುಟುಂಬದ ಜೊತೆ ಕೇರಳದ ದೇವಸ್ಥಾನಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ತಿರುಚ್ಚಿ- ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ಮುಂದೆ ಹೋಗುತ್ತಿದ್ದ ಲಾರಿಯ ಹಿಂದೆ ತಮ್ಮ ಕಾರು ನಿಲ್ಲಿಸಿದ್ದರು.

ಈ ವೇಳೆ ಹಿಂದಿನಿಂದ ಬಂದ ಕಾರ್ಗೊ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಈ ವೇಳೆ ಎರಡು ಲಾರಿ, ಎರಡು ಕಾರು, ಒಂದು ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಪರಿಣಾಮ ರಸ್ತೆಯಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು.

ಘಟನೆಗೆ ಸಂಬಂಧಿಸಿ ವೇಪ್ಪೂರು ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನಿಂದ ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.