ಚಿಕ್ಕಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಬಳಿ ಸರಣಿ ಅಪಘಾತ ಸಂಭವಿಸಿದೆ.
ಬೆಂಗಳೂರು ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ಸಿಗ್ನಲ್ ನಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಒಂದಕ್ಕೊಂದು ಕಾರುಗಳು ಪರಸ್ಪರ ಹಿಂಬದಿಯಿಂದ ಡಿಕ್ಕಿಯಾಗಿ 7 ಕಾರುಗಳ ಮುಂಭಾಗ ಹಿಂಭಾಗ ಜಖಂಗೊಂಡಿವೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ.
ದೇವನಹಳ್ಳಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದ ಬಳಿಕ ಒಂದು ಕಿಲೋಮೀಟರ್ ಗೂ ಹೆಚ್ಚು ದೂರ ಹೆದ್ದಾರಿಯಲ್ಲಿ ವಾಹನಗಳು ಸಿಲುಕಿ ಹಾಕಿಕೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು. ನಂತರ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.










