ಸರಪಳಿಯಲ್ಲಿ ಬಂಧಿಸಿ ಭಾರತೀಯರ ಗಡಿಪಾರು: ಡಿ.ಕೆ ಶಿವಕುಮಾರ್ ಕಿಡಿ.

31

ಬೆಂಗಳೂರು: ಅಕ್ರಮವಾಗಿ ನೆಲಸಿದ್ದ ಭಾರತದ ವಲಸಿಗರನ್ನು ಅಮೆರಿಕಾ ಕೈದಿಗಳಂತೆ ನಡೆಸಿಕೊಂಡಿರುವುದನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ವಲಸಿಗರು ಮನುಷ್ಯರೇ. ಪ್ರಾಣಿಗಳಲ್ಲ. ಅವರನ್ನು ಅಪರಾಧಿಗಳಂತೆ ಕೈ, ಕಾಲುಗಳಿಗೆ ಕೋಳ ಹಾಕಿ ಕರೆತಂದಿದ್ದು ತಪ್ಪು. ಅಮೆರಿಕದಂತಹ ಮುಂದುವರೆದ ದೇಶದಿಂದ ಇಂತಹ ನಡೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಕ್ರಮವಾಗಿ ಅವರ ದೇಶದಲ್ಲಿ ನೆಲೆಸಿದ್ದರೆ, ಅದಕ್ಕೆ ಯಾವ ಶಿಕ್ಷೆ ನೀಡಬೇಕೋ ನೀಡಲಿ. ಅದನ್ನು ಬಿಟ್ಟು, ಈ ರೀತಿ ಖೈದಿಗಳಿಗೆ ಹಾಕಿದಂತೆ ಸರಪಳಿ ಹಾಕಿರುವುದನ್ನು ಯಾರಿಂದಲೂ ಒಪ್ಪಲು ಸಾಧ್ಯವಿಲ್ಲ. ಇದು ಮಾನವ ಕುಲಕ್ಕೆ ಅಗೌರವ ಎಂದು ಕಿಡಿಕಾರಿದರು.