ಸರ್ಕಾರದ ಕಾರ್ಯವೈಖರಿ ಬಗ್ಗೆ ಅಮಿತ್ ಶಾಗೆ ತೃಪ್ತಿ ಇದೆ : ಆರಗ ಜ್ಞಾನೇಂದ್ರ.

61
firstsuddi

ಬೆಂಗಳೂರು : ಇಂದು ಬೆಳಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದೇನೆ. ಮಂಗಳೂರು ಹತ್ಯೆ ಪ್ರಕರಣದ ಬಗ್ಗೆ ಸುದೀರ್ಘ ಮಾಹಿತಿ ಪಡೆದುಕೊಂಡರು. ಮಾಧ್ಯಮಗಳಿಗೆ ಎಲ್ಲವನ್ನೂ ಹೇಳಲಿಕ್ಕೆ ಆಗಲ್ಲ. ಸರ್ಕಾರದ ಕಾರ್ಯವೈಖರಿ ಬಗ್ಗೆ ಅಮಿತ್ ಶಾ ಅವರಿಗೆ ತೃಪ್ತಿ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ವಿಕಾಸಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಗೃಹ ಸಚಿವನಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ಇಂದಿಗೆ ಒಂದು ವರ್ಷ ಆಯ್ತು. ನಾನು ಗೃಹ ಇಲಾಖೆಯನ್ನು ಚೆನ್ನಾಗಿ ನಿಭಾಯಿಸಿದ್ದೇನೆ ಎಂದು ಅಂದುಕೊಂಡಿದ್ದೇನೆ. ಫಾಜಿಲ್ ಹತ್ಯೆ ತನಿಖೆ ಮುಗಿಯುವ ಹಂತಕ್ಕೆ ಬಂದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಕುರಿತು ತನಿಖೆಯಾಗುತ್ತಿದೆ. ಎರಡು ಹತ್ಯೆಗಳ ಆರೋಪಿಗಳು ಯಾರು ಎಂಬುದು ಗೊತ್ತಾಗಿದೆ. ಅವರನ್ನು ಹಿಡಿಯುವ ಕೆಲಸ ಆಗುತ್ತಿದೆ ಎಂದರು.

ಪಿಎಸ್ಐ ನೇಮಕಾತಿ ಹಗರಣದ ತನಿಖೆ ಸಿಐಡಿ ಮಾಡುತ್ತಿದ್ದು, ಆದಷ್ಟು ಬೇಗ ಪಿಎಸ್ಐ ಪ್ರಕರಣದ ವರದಿ ಬರುತ್ತದೆ. ಇನ್ನು ಅನೇಕರು ಬಂಧನ ಆಗುತ್ತಿದ್ದಾರೆ. ಹೀಗಾಗಿ ತನಿಖೆ ಮುಗಿದ ಬಳಿಕ ಪರೀಕ್ಷೆ ಮಾಡುತ್ತೇವೆ. ವಯಸ್ಸಿನ ಮಿತಿ ಬಗ್ಗೆ ಯಾರಿಗೂ ಭೀತಿ ಬೇಡ ಎಂದು ಆಶ್ವಾಸನೆ ನೀಡಿದರು.

ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾ ಪೋಹ ಅಷ್ಟೇ. ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಅಮಿತ್ ಶಾ ಅವರ ಗಮನಕ್ಕೆ ಬಂದಿದೆ. ರಾಹುಲ್ ಗಾಂಧಿಯವರ ಆರೋಪಗಳ ಬಗ್ಗೆಯೂ ಅವರಿಗೆ ಗೊತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.