ಬೆಂಗಳೂರು : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಂದೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹಿಳೆಯರಿಗೆ ಬಂಪರ್ ಯೋಜನೆಗಳನ್ನ ಪ್ರಕಟಿಸಿದ್ದಾರೆ.
ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ 6 ತಿಂಗಳ ಹೆರಿಗೆ ರಜೆಯೊಂದಿಗೆ ಆರು ತಿಂಗಳು ಮಕ್ಕಳ ಆರೈಕೆ ರಜೆ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಅದರ ಜೊತೆಗೆ ರಾಜ್ಯಾದ್ಯಂತ ಸಂಜೀವಿನಿ ಯೋಜನೆಯ ಅಡಿ ಮಹಿಳಾ ಸ್ವಸಹಾಯ ಸಂಘಗಳಿಗೆ 60 ಸಾವಿರ ಮಹಿಳೆಯರಿಗೆ ಸ್ವಯಂ ಉದ್ಯೋಗದ ಅವಕಾಶ ನೀಡಲಾಗುವುದು. ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್‌ಲೈನ್ ಮಾರುಕಟ್ಟೆ ಸೌಲಭ್ಯ, ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹಿಸಲು ಶೇ.4ರಷ್ಟು ಬಡ್ಡಿ ದರದಲ್ಲಿ ಸಾಲಸೌಲಭ್ಯ, ವನಿತಾ ಸಂಗಾತಿ – ಗಾರ್ಮೆಂಟ್ಸ್ ಕಾರ್ಮಿಕರಿಗೆ ಉಚಿತ ಬಸ್ ಪಾಸ್, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನಿರ್ಭಯ ಸಹಾಯ ಕೇಂದ್ರ, ಮಹಿಳಾ ಸುರಕ್ಷತೆಗೆ ಬೆಂಗಳೂರಿನ 7.500 ಸಿಸಿಟಿವಿ ಅಳವಡಿಕೆ, ಕೊಪ್ಪಳದಲ್ಲಿ ನಾರಿ ಸುವರ್ಣ ಕುರಿ ಸಂವರ್ಧನ ಕೇಂದ್ರ, ಚಾಮರಾಜನಗರದಲ್ಲಿ ಅರಿಶಿಣ ಮಾರುಕಟ್ಟೆ, ಸಾವಯವ ಮತ್ತು ಸಿರಿಧಾನ್ಯ ಮಾರಾಟಕ್ಕೆ ಇ-ಮಾರುಕಟ್ಟೆಯನ್ನು ಸ್ಥಾಪನೆ ಮಾಡಲಾಗುತ್ತದೆ. ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಗೋದಾಮು-ಅಂಗಡಿ ನೀಡುವಲ್ಲಿ ಶೇ.10 ರಷ್ಟು ಮೀಸಲು, ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ‘ಎಲಿವೇಟ್ ವುವನ್’ ಎಂಬ ಕಾರ್ಯಕ್ರಮವನ್ನು ಜಾರಿಗೊಳಿಸುವುದಾಗಿ ಹೇಳಿದ್ದಾರೆ.










