ಬೆಂಗಳೂರು : ಚಿರಂಜೀವಿ ಸರ್ಜಾ ಅವರ ಪತ್ನಿ ನಟಿ ಮೇಘನಾ ರಾಜ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ನಗರದ ಕೆಆರ್ ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆ 7 ನಿಮಿಷಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇಷ್ಟು ದಿನ ಜೂನಿಯರ್ ಚಿರುಗಾಗಿ ಕಾದು ಕುಳಿತಿದ್ದ ಸರ್ಜಾ ಕುಟುಂಬ ಹಾಗೂ ಚಿರು ಆಪ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಚಿರು ಅಭಿಮಾನಿಗಳು ಆಸ್ಪತ್ರೆ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದ್ದಾರೆ.










