ಸರ್ವಪಕ್ಷ ಸಭೆ ಮುಗಿಯುವ ತನಕ ಲಾಕ್ ಡೌನ್ ಬಗ್ಗೆ ಯಾವುದೇ ನಿರ್ಧಾರ ಇಲ್ಲ : ಬಿ.ಎಸ್.ಯಡಿಯೂರಪ್ಪ.

168
firstsuddi

ಬೆಂಗಳೂರು : ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪನವರು, ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಬಿಟ್ಟು ಉಳಿದೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಏಪ್ರಿಲ್ 18 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದೇನೆ. ಆ ಸಭೆಯಲ್ಲಿ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಸರ್ವಪಕ್ಷ ಸಭೆ ಮುಗಿಯುವ ತನಕ ಲಾಕ್ ಡೌನ್ ಬಗ್ಗೆ ಯಾವುದೇ ನಿರ್ಧಾರ ಇಲ್ಲ. ನೈಟ್ ಕಫ್ರ್ಯೂ ಬಗ್ಗೆ ತಜ್ಞರ ಜೊತೆ ಚರ್ಚಿಸಿ ಬಳಿಕ ನಿರ್ಧಾರಿಸಲಾಗುತ್ತದೆ. ಅಗತ್ಯಬಿದ್ದರೆ ಇನ್ನೊಂದೆರಡು ಜಿಲ್ಲೆಗೆ ನೈಟ್ ಕರ್ಫ್ಯೂ ವಿಸ್ತರಿಸುತ್ತೇವೆ. ಆದರೆ ವೀಕೆಂಡ್ ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಲಾಕ್ ಡೌನ್ ಹೊರತುಪಡಿಸಿ ಇತರ ಕಟ್ಟುನಿಟ್ಟಿನ ಕ್ರಮಗಳ ಕುರಿತು ಏನೆಲ್ಲಾ ಮಾಡಬೇಕು ಎನ್ನುವ ಬಗ್ಗೆ ಸರ್ವ ಪಕ್ಷ ನಾಯಕರ ಸಭೆ ನಡೆಸಿ ಅವರ ಅಭಿಪ್ರಾಯ ಪಡೆದು ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಬಿ.ಎಸ್.ಯಡಿಯೂರಪ್ಪನವರು ತಿಳಿಸಿದ್ದಾರೆ.