ಬಾಲಿವುಡ್ ನಟ ಸಲ್ಮಾನ್ ಖಾನ್‍ಗೆ ಹುಟ್ಟುಹಬ್ಬದ ಸಂಭ್ರಮ…

74
firstsuddi

ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್‍ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಲ್ಲು 56ನೇ ವಸಂತಕ್ಕೆ  ಕಾಲಿಟ್ಟಿದ್ದಾರೆ.

ಇಂದು ಸಲ್ಮಾನ್ ಖಾನ್ ಫಾರ್ಮ್‍ಹೌಸ್‍ನಲ್ಲಿ ಬರ್ತ್ಡೇ ಆಚರಣೆ ಮಾಡಿಕೊಂಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಸಲ್ಲುಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ. ಸಲ್ಮಾನ್ ಖಾನ್ ಅವರು ಸದ್ಯ ಪನ್ವೆಲ್ ನಲ್ಲಿರುವ ಫಾರ್ಮ್‍ಹೌಸ್‍ನಲ್ಲಿ ಇದ್ದಾರೆ.

ಶನಿವಾರ ರಾತ್ರಿ ಪನ್ವೆಲ್ ನಲ್ಲಿರುವ ಅವರ ಫಾರ್ಮ್‍ಹೌಸ್‍ನಲ್ಲಿ ಹಾವು ಕಚ್ಚಿದೆ. ತಕ್ಷಣವೇ ಅವರನ್ನು ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದು ವಿಷರಹಿತ ಹಾವಾಗಿದ್ದು, ಕೆಲವು ಗಂಟೆಗಳ ಚಿಕಿತ್ಸೆ ಬಳಿಕ ಸಲ್ಮಾನ್ ಖಾನ್ ನಿನ್ನೆ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ರಾತ್ರಿ, ಫಾರ್ಮ್‍ಹೌಸ್‍ನಲ್ಲಿ ಕುಟುಂಬದವರೊಂದಿಗೆ 56ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಸಲ್ಲುಗೆ ಡಾ.ಕುಲದೀಪ್ ಸಲ್ಗೋತ್ರಾ ಅವರು ಚಿಕಿತ್ಸೆ ನೀಡಿದ್ದು, ಆರೋಗ್ಯ ಚೆನ್ನಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ‘ಟೈಗರ್ 3’ ಚಿತ್ರದ ಕೆಲಸಗಳಲ್ಲಿ ಸಲ್ಮಾನ್ ಖಾನ್ ತೊಡಗಿಕೊಂಡಿದ್ದಾರೆ. ಈ ವರ್ಷ ಅವರು ನಟಿಸಿದ ‘ರಾಧೆ: ಯುವರ್ ಮೋಸ್ಟ್ ವಾಂಟೆಡ್ ಭಾಯ್’ ಹಾಗೂ ‘ಅಂತಿಮ್: ದಿ ಫೈನಲ್ ಟ್ರುಥ್’ ಚಿತ್ರಗಳು ತೆರೆಕಂಡವು. ಆದರೆ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಕಾಣಲಿಲ್ಲ.