ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ. ಇದೀಗ ಮತ್ತೆ ಸಲ್ಲುಗೆ ಕೊಲೆ ಬೆದರಿಕೆ ಕರೆ ಬಂದಿದೆ.
ಬೆದರಿಕೆ ಹಾಕಿರುವ ವ್ಯಕ್ತಿ ತನ್ನನ್ನು ರಾಜಸ್ಥಾನದ ಜೋಧ್‍ಪುರದ ರಾಕಿಭಾಯ್ ಎಂದು ಪರಿಚಯಿಸಿಕೊಂಡಿದ್ದಾನೆ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಮುಂಬೈ ಪೊಲೀಸರ ಕಂಟ್ರೋಲ್ ರೂಂಗೆ ಕರೆ ಬಂದಿದೆ. ಏಪ್ರಿಲ್ 30ರಂದು ಸಲ್ಲುನ ಹತ್ಯೆ ಮಾಡಲಾಗುವುದು ಎಂದು ಕರೆಯಲ್ಲಿ ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಮಾರ್ಚ್ ತಿಂಗಳಲ್ಲಿ ಸಲ್ಮಾನ್ ಖಾನ್ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಬಂದಿತ್ತು. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದರು. ನಟನ ಆಪ್ತರೊಬ್ಬರಿಗೆ ಕಳುಹಿಸಲಾದ ಇ-ಮೇಲ್‍ನಲ್ಲಿ ಗ್ಯಾಂಗ್‍ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಇತ್ತೀಚಿನ ಸಂದರ್ಶನದಲ್ಲಿ ಉಲ್ಲೇಖಿಸಿ “ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿಯಾಗಿದೆ” ಎಂದು ಸಂದೇಶ ಕಳುಹಿಸಿದ್ದ. ಈ ಕುರಿತು ಬಾಂದ್ರಾ ಮತ್ತು ರಾಜಸ್ಥಾನ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ.
ಸಲ್ಮಾನ್ ಗೆ ನಿರಂತರವಾಗಿ ಕೊಲೆ ಬೆದರಿಕೆ ಕರೆ ಹೆಚ್ಚಾಗುತ್ತಿರುವ ಹಿನ್ನಲೆ ಬುಲೆಟ್ ಪ್ರೂಫ್ ಕಾರ್ ಖರೀದಿಸಿದ್ದಾರೆ ಎನ್ನುವ ಮಾಹಿತಿ ಇದೆ.










