ಸಾಮಾಜಿಕ ಜಾಲತಾಣಗಳಲ್ಲಿ ಲತಾ ಮಂಗೇಶ್ಕರ್ ಅವರ ನಿಧನ ಸುದ್ದಿ ವೈರಲ್-ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರಿಂದ ಸ್ಪಷ್ಟನೆ…

520
firstsuddi

ಮುಂಬೈ : ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರು ನವೆಂಬರ್ 11ರಂದು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವಿಷಯ ತಿಳಿದ ಕೂಡಲೇ ಸಾಮಾಜಿಕ ಜಾಲತಾಣಗಳಲ್ಲಿ ಲತಾ ಮಂಗೇಶ್ಕರ್ ಅವರು ನಿಧನರಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಈ ಕುರಿತು ಪ್ರತಿಕ್ರಯಿಸಿದ ಲತಾ ಮಂಗೇಶ್ಕರ್ ಅವರ ಕುಟುಂಬಸ್ಥರು, ಲತಾ ಅವರು ಆರೋಗ್ಯವಾಗಿದ್ದಾರೆ. ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಲತಾ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಅವರು ಆರೋಗ್ಯವಾಗಿದ್ದಾರೆ. ವೈದ್ಯರು ಅವರನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಇಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಸಬೇಡಿ ಎಂದು ನೆಟ್ಟಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ.