ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯ ಬರ್ಬರ ಕೊಲೆ…

96
firstsuddi

ಚಿತ್ರದುರ್ಗ : ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹೊರಪೇಟೆ ಬಡಾವಣೆಯ ನಿವಾಸಿ ಮಹ್ಮದ್ ಅಜರ್(28) ಮೃತ ವ್ಯಕ್ತಿ. ಜಿಲ್ಲೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಬಳಿ ಮಾರಕಾಸ್ತ್ರದಿಂದ ಹೊಡೆದು ಅಜರ್ ಅವರನ್ನು ಹತ್ಯೆಗೈದಿದ್ದಾರೆ.

ಮುಬಾರಕ್, ಬಾಬು, ಪ್ರದೀಪ್ ಅವರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಣದ ವ್ಯವಹಾರ ಹಿನ್ನೆಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.
ಈ ಕುರಿತು ದೂರು ದಾಖಲಿಸಿಕೊಂಡ ಚಿತ್ರದುರ್ಗ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.