ಮೂಡಿಗೆರೆ : ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹೆಗ್ಗರವಳ್ಳಿ ಗ್ರಾಮದಲ್ಲಿ ನಡೆದಿದೆ.
ಎಚ್.ಬಿ.ಈರೇಗೌಡ(79) ಆತ್ಮಹತ್ಯೆ ಮಾಡಿಕೊಂಡ ರೈತ. ಸುಮಾರು ಆರು ಲಕ್ಷ ಬ್ಯಾಂಕ್ನಲ್ಲಿ ಹಾಗೂ ಕೈಸಾಲ ಮಾಡಿಕೊಂಡಿದ್ದರು. ಅಧಿಕ ಮಳೆಯಿಂದ ಕಾಫಿ ಹಾಗೂ ಮೆಣಸು ಬೆಳೆ ನಾಶವಾದ ಹಿನ್ನಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










