ಸಿ.ಎಂ ನೇತೃತ್ವದಲ್ಲಿ ಮಾರ್ಚ್.8 ರಂದು ರಾಜ್ಯ ಬಜೆಟ್ ಮಂಡನೆ…

93
First Suddi

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಮಾರ್ಚ್ 8 ರಂದು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಎಂದು ಗೃಹ, ಕಾನೂನು, ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ ಅವರು ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆ ದಿನಾಂಕ ನಿಗದಪಡಿಸಲಾಗಿದ್ದು, ಮಾರ್ಚ್ 8 ರಂದು 2021-22ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ ಎಂದರು. ಕೊರೊನಾ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಹಣಕಾಸಿನ ಇತಿಮಿತಿಯೊಳಗೆ ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದಿದ್ದಾರೆ.