ಸಿ.ಡಿ ತೋರಿಸಿ ಬ್ಲಾಕ್‍ಮೇಲ್ ಮಾಡಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ..?-ಸಿದ್ದರಾಮಯ್ಯ.

179
firstsuddi

ಬೆಂಗಳೂರು : ಸಿ.ಡಿ ತೋರಿಸಿ ಬ್ಲಾಕ್‍ಮೇಲ್ ಮಾಡಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ..? ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಸಿಡಿ ತೋರಿಸಿ ಬ್ಲಾಕ್‍ಮೇಲ್ ಮಾಡಿ ಮಂತ್ರಿ ಸ್ಥಾನ ಪಡೆದುಕೊಂಡಿದ್ದಾರೆ ಎಂಬ ಆರೋಪ ಎಲ್ಲೆಡೆ ಕೇಳಿ ಬರುತ್ತಿದ್ದು, ಇದಕ್ಕೆ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಪ್ರತಿಕ್ರಯಿಸಿದ್ದು, “ಸಿ.ಡಿ ತೋರಿಸಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆದರಿಸಿ, ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಬ್ಲಾಕ್‍ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ?
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ.
ಬಿ.ಎಸ್ ಯಡಿಯೂರಪ್ಪ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹಾಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು ಎಂದು ಕಿಡಿಕಾರಿದ್ದಾರೆ.