ಬೆಂಗಳೂರು : ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರಿರುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಸುದ್ದಿಗಾರೊಂದಿಗೆ ಮಾತನಾಡಿದ್ದಾರೆ. ಸಿ.ಪಿ.ಯೋಗೇಶ್ವರ್ ಕಾಂಗ್ರೇಸ್ ಪಕ್ಷ ಸೇರಿರುವುದು ನನಗೇನು ಆಶ್ಚರ್ಯವನ್ನುಂಟು ಮಾಡಿಲ್ಲ. ಅವರು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಲೇ ನನಗೆ ಅವರು ಕಾಂಗ್ರೇಸ್ ಪಕ್ಷ ಸೇರಬಹುದೆಂಬ ನಿರೀಕ್ಷೆ ಇತ್ತು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಜೆಪಿ ನಗರದ ತಮ್ಮ ಮನೆಯ ಬಳಿ ಇಂದು ವರದಿಗಾರರ ಜೊತೆ ಮಾತಮಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭೇಟಿ ಮಾಡುವಂತೆ ನನಗೆ ತಿಳಿಸಿದ್ದಾರೆ. ಹಾಗಾಗಿ ನಾನು ಅಲ್ಲಿಗೆ ಹೋಗುತ್ತಿದ್ದೇನೆ. ಸದ್ಯದ ರಾಜಕಾರಣ ಗಮನಿಸಿದರೆ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಕುಮಾರಸ್ವಾಮಿಯವರೇ ಟಾರ್ಗೆಟ್ ಎಂದರು. ಚನ್ನಪಟ್ಟಣದ ಚುನಾವಣೆಯ ಅಭ್ಯರ್ಥಿ ಬಗ್ಗೆ ಪ್ರತಿಕ್ರಿಸಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಅಭ್ಯರ್ಥಿ ಯಾರು ಅಂತ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಎನ್‍ಡಿಎ ಕೂಟದಿಂದಲೇ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು. ಅನಸೂಯ ಮಂಜುನಾಥ್ ಅಭ್ಯರ್ಥಿ ಆಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ಕಾದು ನೋಡಿ ಎಂದು ಹೇಳಿದರು.










