ಸಿಎಂ ಬೊಮ್ಮಾಯಿ ಕಾರು ತಪಾಸಣೆ ನಡೆಸಿದ ಚುನಾವಣಾಧಿಕಾರಿಗಳು.

61
firstsuddi

ಬೆಂಗಳೂರು ಗ್ರಾಮಾಂತರ : ಇಂದು ದೊಡ್ಡಬಳ್ಳಾಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಸಿಎಂ ಇಂದು ಬೆಂಗಳೂರಿನ ತಮ್ಮ ನಿವಾಸದಿಂದ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲು ತೆರಳುತ್ತಿದ್ದರು. ಈ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹುಡ್ಯ ಬಳಿಯ ಚೆಕ್ ಪೋಸ್ಟ್ ನಲ್ಲಿ ಕಾರು ತಡೆದು ತಪಾಸಣೆ ನಡೆಸಿದ ಚುನಾವಣಾಧಿಕಾರಿಗಳು ನಂತರ ಅವರು ತೆರಳಲು ಅನುವು ಮಾಡಿಕೊಟ್ಟರು.

ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆ ಚೆಕ್ ಪೋಸ್ಟ್ ನಲ್ಲಿ ಸಿಎಂ ಕಾರನ್ನು ತಪಾಸಣೆ ಮಾಡಿದ್ದಾರೆ. ಈ ವೇಳೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್​ಪಿ ನಾಗರಾಜು ಸೇರಿದಂತೆ ಚುನಾವಣಾ ಸಿಬ್ಬಂದಿ ಹಾಜರಿದ್ದರು.