ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಸಿಎಂ ಬೊಮ್ಮಾಯಿ ಮೊದಲ ಬಾರಿಗೆ ಬಜೆಟ್ ಮಂಡಿಸಲಿದ್ದು, ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.
ಇಂದು ಮಧ್ಯಾಹ್ನ 12.30ಕ್ಕೆ ಸಿಎಂ ವಿಧಾನಸಭೆಯಲ್ಲಿ 2022-23ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಬಜೆಟ್ಗೂ ಮುನ್ನ ಸಿಎಂ ದೇವಾಲಯಕ್ಕೆ ತೆರಳಿ, ಪೂಜೆ ಸಲ್ಲಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ನೀರಾವರಿ, ಕೃಷಿ, ಆರೋಗ್ಯ, ಶಿಕ್ಷಣ ಮೂಲ ಸೌಕರ್ಯ, ಪ್ರವಾಸೋದ್ಯಮ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ.
ಬಜೆಟ್ ಗೆ ಪೂರ್ವಭಾವಿಯಾಗಿ ಫೆ.25ರವರೆಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ವಿವಿಧ ವರ್ಗಗಳ ಪ್ರತಿನಿಧಿಗಳೊಂದಿಗೆ ಸಿಎಂ ಬೊಮ್ಮಾಯಿ ಸಮಾಲೋಚನೆ ನಡೆಸಿದ್ದಾರೆ.










