ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಮಳೆಹಾನಿ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ.

74
firstsuddi

ಬೆಂಗಳೂರು : ರಾಜ್ಯದಲ್ಲಿ ಸಂಭವಿಸಿರುವ ಮಳೆಹಾನಿ ಸಂಬಂಧ ದೂರವಾಣಿ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಬೇಕಾದ ಸಂಪೂರ್ಣ ನೆರವನ್ನು ಕೇಂದ್ರದಿಂದ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಇಂದು ಬೆಳಗ್ಗೆ ದೂರವಾಣಿ ಕರೆ ಮಾಡಿ ರಾಜ್ಯಾದ್ಯಂತ ಆಗಿರುವ ಸಂಪೂರ್ಣ ನೆರೆ ಬಗ್ಗೆ ವಿಚಾರಿಸಿದರು. ಬೆಳೆ ನಷ್ಟ, ಸಾವು – ನೋವು, ಇತರ ಮಾಹಿತಿ ಪಡೆದಿದ್ದಾರೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ದೂರವಾಣಿ ಕರೆ ಮಾಡಿ ಇಲ್ಲಿಯ ಪ್ರವಾಹದ ಪರಿಸ್ಥಿತಿ ಬಗ್ಗೆ ಕೇಳಿದ್ದಾರೆ. ಕೇಂದ್ರದಿಂದ ಏನು ಸಹಾಯ ಮಾಡಬೇಕೋ, ಅದೆಲ್ಲವನ್ನೂ ಮಾಡಲು ಸಿದ್ಧವಿದ್ದೇವೆ ಎಂದಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಯಲಹಂಕ, ಜಕ್ಕೂರಿನ ನೆಹರೂ ಸಂಸ್ಥೆ, ಮಾನ್ಯತಾ ಟೆಕ್ ಪಾರ್ಕ್ ಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ವೀಕ್ಷಿಸಿದರು.