ಸಿಎಂ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಕೊರೊನಾಗೆ ಬಲಿ…

154
firstsuddi

ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಪ್ರತಿದಿನ ಅನೇಕ ಮಂದಿ ಆಕ್ಸಿಜನ್ ಸಿಗದೇ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಎಷ್ಟೇ ಪ್ರಭಾವವಿದ್ದರೂ ಕೊರೊನಾದ ಮುಂದೆ ಏನೂ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಆಶಿಮ್ ಬ್ಯಾನರ್ಜಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಆಶಿಮ್ ಬ್ಯಾನರ್ಜಿ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ಕೋಲ್ಕತ್ತಾದ ಮೆಡಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮುಖ್ಯಸ್ಥ ಡಾ.ಅಲೋಕ್ ರಾಯ್ ಅವರು ಮಾಹಿತಿ ನೀಡಿದ್ದಾರೆ.