ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ರೇಣುಕಾಚಾರ್ಯ ಹಾಗೂ ಜೀವರಾಜ್ ನೇಮಕ…

146
firstsuddi

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಆಪ್ತ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಹಾಗೂ ಡಿ.ಎನ್. ಜೀವರಾಜ್ ಅವರು  ನೇಮಕಗೊಂಡಿದ್ದಾರೆ.

ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಹಾಗೂ ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್ ಇಬ್ಬರೂ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲೂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಯಡಿಯೂರಪ್ಪ ರಾಜೀನಾಮೆ ಬಳಿಕ ಅವರ ಆಪ್ತ ಶಾಸಕರಾದ ರೇಣುಕಾಚಾರ್ಯ ಹಾಗೂ ಜೀವರಾಜ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೈ ಬಿಡಲಾಗಿತ್ತು. ಆದರೆ ಬೊಮ್ಮಾಯಿ,  ಮತ್ತೆ  ಅವರನ್ನು ತಮ್ಮ ರಾಜಕೀಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಇವರನ್ನು ನೇಮಿಸಿ, ಸಂಪುಟ ದರ್ಜೆಯ ಸಚಿವರ ಸ್ನಾನಮಾನದೊಂದಿಗೆ, ಸಂಪುಟ ದರ್ಜೆ ಸಚಿವರಿಗೆ ಅನ್ವಯಿಸುವ ಎಲ್ಲ ಸೌಲಭ್ಯಗಳನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.