ಸಿಎಂ ರಾಜೀನಾಮೆ ಸುಳಿವಿನ ಬಗ್ಗೆ ಬಿಜೆಪಿ ನಾಯಕರು ಹೇಳಿದ್ದೇನು?

100
firstsuddi

ಬೆಂಗಳೂರು : ರಾಜೀನಾಮೆ ಬಗ್ಗೆ ಬಿ.ಎಸ್.ಯಡಿಯೂರಪ್ಪನವರು ಸುಳಿವು ನೀಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ನನಗಂತೂ ಸಿಎಂ ಬಿಎಸ್ ವೈ ರಾಜೀನಾಮೆ ವಿಚಾರದ ಬಗ್ಗೆ ಏನೂ ಮಾಹಿತಿ ಇಲ್ಲ. ಈ ಬಗ್ಗೆ ನಮಗೆ ಯಾವ ಆತಂಕವೂ ಇಲ್ಲ ಎಂದು ಸಚಿವ ಭೈರತಿ ಬಸವರಾಜ್ ಅವರು ಗರಂ ಆದರು.

ಸಿಎಂ ಭೇಟಿ ಮಾಡಿದ್ದೇವೆ. ಆ ಸಂದರ್ಭದಲ್ಲಿ ಬಿಎಸ್ ವೈ ಅವರು ನನಗೆ ಯಾವುದೇ ಸಂದೇಶ ಬಂದಿಲ್ಲ. ರಾಜೀನಾಮೆ ಕೇಳಿದರೆ ಕೊಡುವೆ. ಪ್ರತಿಭಟನೆ ಮಾಡದಂತೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಗೊಂದಲ ಬೇಡ ಎಂದು ರಾಜುಗೌಡ ಹೇಳಿದ್ದಾರೆ.

ಡಿಸಿಎಂ ಅಶ್ವತ್ಥ್ ನಾರಾಯಣ್ ಮಾತನಾಡಿ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಬಿಎಸ್ ವೈ ನಮ್ಮ ನಾಯಕ, ಬದಲಾವಣೆ ಪ್ರಶ್ನೆ ಉದ್ಭವಿಸಲ್ಲ ಅಂತ ತಿಳಿಸಿದ್ದಾರೆ.

ಸಿಎಂ ಹೇಳಿದ ಮೇಲೆ ಮುಗಿಯಿತು. ನಮಗೇನು ಆತಂಕ ಇಲ್ಲ. ಹೈಕಮಾಂಡ್ ಹೇಳಿದಂತೆ ನಿಯಮ ಅನುಸರಿಸಬೇಕು ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದರು.

ನಮಗೆ ಸಿಎಂ ಯಡಿಯೂರಪ್ಪನವರೇ ಹೈಕಮಾಂಡ್. ನಮ್ಮ ಸಚಿವ ಸ್ಥಾನಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ಇನ್ನೂ ಸಚಿವ ಉಮೇಶ ಕತ್ತಿ ಮಾತನಾಡಿ ನಾನು ಸಹ ಎಂಟು ಸಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಯಡಿಯೂರಪ್ಪಗೆ ಸರಿಸಮಾನವಾದ ಅನುಭವ ನನಗೂ ಇದೆ ಎಂದರು.