ಸಿಎಂ ಹಾಗೂ ಸುಧಾಕರ್ ರಾಜೀನಾಮೆ ನೀಡಬೇಕು : ಸಿದ್ದರಾಮಯ್ಯ ಒತ್ತಾಯ…

103
First Suddi

ಬೆಂಗಳೂರು : ಸರಣಿ ಟ್ವೀಟ್ ಮೂಲಕ ತಮ್ಮ ಬೇಸರವನ್ನು ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ. ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿಯವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್  ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.