ಸಿಎಲ್‍ಪಿ ನಾಯಕರಾಗಿ ಸಿದ್ದರಾಮಯ್ಯ ಅವರೇ ಮುಂದುವರಿಕೆ…?

286
firstsuddi

ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನ್ನು ಕಂಡಿದ್ದು, ಇದರಿಂದ ಸೋಲಿನ ನೈತಿಕ ಹೊಣೆ ಹೊತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು. ಆದರೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಅರ್ಜಿಯನ್ನು ಕಾಂಗ್ರೆಸ್ ಇನ್ನೂ ಅಂಗೀಕಾರ ಮಾಡಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರೇ ಶಾಸಕಾಂಗ ಪಕ್ಷದ ನಾಯಕನಾಗಿ ಮುಂದುವರೆಯುತ್ತಾರೆ ಎನ್ನಲಾಗುತ್ತಿದೆ. ಪ್ರಸ್ತುತ ಹೃದಯ ಚಿಕಿತ್ಸೆಯನ್ನು ಪಡೆದು ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, ಬಳಿಕ ತಾವು ಸಲ್ಲಿಸಿದ್ದ ರಾಜೀನಾಮೆಯನ್ನು ವಾಪಾಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಆರೋಗ್ಯ ಸಂಪೂರ್ಣ ಸುಧಾರಿಸಿದ ಬಳಿಕ ದೆಹಲಿಗೆ ಬಂದು ಈ ಕುರಿತು ಮಾತನಾಡುವಂತೆ ತಿಳಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಸಿದ್ದರಾಮಯ್ಯ ಅವರೇ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರೆಯುತ್ತಾರೆ ಎಂದು ಹೇಳಲಾಗುತ್ತಿದೆ.