ಸಿದ್ದರಾಮಯ್ಯ, ಡಿಕೆಶಿ, ರಮೇಶ್‍ಕುಮಾರ್ ಏಕಪತ್ನಿವ್ರತಸ್ಥರಾ?- ಸಚಿವ ಸುಧಾಕರ್ ಪ್ರಶ್ನೆ..!

181
Firstsuddi

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಕುಮಾರ್ ಏಕಪತ್ನಿವ್ರತಸ್ಥರಾ? ಎಂದು ಸಚಿವ ಸುಧಾಕರ್ ಅವರು ಪ್ರಶ್ನೆ ಮಾಡಿದ್ದಾರೆ.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಿದ್ದಾಗ ಯಾರು ಏನೇನು ಮಾಡಿದ್ರು ಅನ್ನೋದು ಗೊತ್ತಾಗಲಿ. ಎಲ್ಲದರ ಬಗ್ಗೆಯೂ ತನಿಖೆಯಾಗಲಿ. ಸಿದ್ದರಾಮಯ್ಯ, ರಮೇಶ್‍ಕುಮಾರ್, ಡಿ.ಕೆ.ಶಿವಕುಮಾರ್ ಏನು ಸತ್ಯಹರಿಶ್ಚಂದ್ರರಾ? ಅವರೆಲ್ಲರೂ ಏಕಪತ್ನಿವ್ರತಸ್ಥರಾ? ಎಂದು ಪ್ರಶ್ನೆ ಮಾಡಿದ್ದಾರೆ.

ನೀವು ನಿಮ್ಮ ಜೀವನದಲ್ಲಿ ಅನೈತಿಕ ಸಂಬಂಧ ಇಟ್ಟುಕೊಂಡಿಲ್ವಾ? ನನ್ನನ್ನು ಸೇರಿದಂತೆ ಎಲ್ಲ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆ ಆಗಲಿ. ಯಾರಿಗೆ ಅನೈತಿಕ ಸಂಬಂಧ ಇದೆ ಎಂಬುದು ತಿಳಿಯಲಿ ಬಿಡಿ. ನೈತಿಕತೆಯ ಬಗ್ಗೆ ಮಾತನಾಡುವ ಇವರು ಸಮಾಜಕ್ಕೆ ಮಾದರಿ ಆಗಿದ್ದರೆ ಇವರೆಲ್ಲರೂ ತನಿಖೆಗೆ ಒಪ್ಪಿಕೊಳ್ಳಲಿ ಎಂದು ಸಚಿವ ಸುಧಾಕರ್ ಅವರು ಸವಾಲು ಹಾಕಿದ್ದಾರೆ.