ಸಿದ್ದರಾಮಯ್ಯ ದಾವಣಗೆರೆ ಪ್ರವಾಸ ರದ್ದು – ಕಾರಣವೇನು?

77
firstsuddi

ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ದಾವಣಗೆರೆ ಪ್ರವಾಸವನ್ನು ರದ್ದು ಮಾಡಿದ್ದಾರೆ.

ದಾವಣಗೆರೆಯಲ್ಲಿ ಬೆಳಗ್ಗಿನಿಂದಲೇ ಭಾರಿ ಮಳೆ ಯಾಗುತ್ತಿದ್ದು, ದಟ್ಟ ಮೋಡ ಕವಿದ ವಾತಾವರಣ ಇರುವುದರಿಂದ ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಕೊನೆ ಕ್ಷಣದಲ್ಲಿ ದಾವಣಗೆರೆ ಪ್ರವಾಸವನ್ನು ರದ್ದು ಮಾಡಿದ್ದಾರೆ.

ಜಕ್ಕೂರು ಏರೋಡ್ರಂನಿಂದ ಹೆಲಿಕಾಪ್ಟರ್ ಮೂಲಕ ಬೆಳಗ್ಗೆ 9.30ಕ್ಕೆ ಹೊರಟು 11 ಗಂಟೆಗೆ ದಾವಣಗೆರೆ ಎಂಬಿಎ ಕಾಲೇಜು ಮೈದಾನ ತಲುಪಿ ಅಲ್ಲಿ ಮೊದಲು ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಅದಾದ ಬಳಿಕ ಹಿಂದುಳಿದ ವರ್ಗಗಳ ಒಕ್ಕೂಟ ಆಯೋಜಿಸಿರುವ ಧರಣಿಯಲ್ಲಿ ಭಾಗವಹಿಸಬೇಕಿತ್ತು. ನಂತರ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಕರೆ ಕೊಟ್ಟಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕಿತ್ತು.

ಇಡೀ ದಿನ ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ಎಲ್ಲ ಕಾರ್ಯಕ್ರಮವನ್ನೂ ರದ್ದುಪಡಿಸಿ ಸಿದ್ದರಾಮಯ್ಯ ಬೆಂಗಳೂರಿನಲ್ಲೇ ಉಳಿಯುವಂತಾಗಿದೆ.