ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ; ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ದೂರು…

68
firstsuddi

ಬೆಂಗಳೂರು : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ಸಲ್ಲಿಸಿದ್ದಾರೆ. ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ನೇತೃತ್ವದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.

ಸಿ.ಟಿ.ರವಿ ಕಾನೂನು ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿ ಸಿ.ಟಿ.ರವಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಸಿದ್ರಾಮುಲ್ಲಾಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಸಿ.ಟಿ.ರವಿ ಹೇಳಿದ್ದರು. ಇದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕೂಡ ಗ್ರಾಸವಾಗಿದೆ. ಸಿ.ಟಿ.ರವಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದರು. ಹಿಂದೂಗಳ ಹತ್ಯೆ ಆಗುತ್ತೆ ಎಂದು ಯಾವ ಆಧಾರದಲ್ಲಿ ಹೇಳುತ್ತಾರೆ. ರಾಜ್ಯದಲ್ಲಿ ಅಶಾಂತಿ ಮೂಡಿಸುವ ಕೆಲಸ ನಡೆದಿದೆ. ಭ್ರಷ್ಟಾಚಾರ, ಮತಗಳ್ಳತನ ಕೇಸ್ ಮುಚ್ಚಿ ಹಾಕಲು ಇಂತಹ ಹೇಳಿಕೆ ನೀಡಲಾಗುತ್ತಿದೆ. ನಮ್ಮ ಕಡೆಯವರ ಮೇಲೆ ಮಾತ್ರ ಪ್ರಕರಣ ದಾಖಲಿಸುತ್ತಿದ್ದಾರೆ. ಮೊದಲು ಶಾಸಕ ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದರು.