‘ಮೋದಿ ಮೋದಿ’ ಎನ್ನುವುದರಿಂದ ಅಭಿವೃದ್ಧಿ ಆಗಲ್ಲ: ಸಿದ್ದರಾಮಯ್ಯ ವಾಗ್ದಾಳಿ.

6

ಚಿಕ್ಕಮಗಳೂರು: ಕಡೂರು ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ತಾವು ಯಾವುದೋ ದೇವಸ್ಥಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ಕೆಲವರು “ಮೋದಿ… ಮೋದಿ…” ಎಂದು ಘೋಷಣೆ ಕೂಗಿದ್ದರು. “ಮೋದಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರಾ? ಸಂಗೊಳ್ಳಿ ರಾಯಣ್ಣನಂತೆ ಹೋರಾಡಿದ್ದರಾ? ಜನ ಸುಮ್ಮನೆ ಮೋದಿ… ಮೋದಿ… ಎಂದು ಹೇಳುತ್ತಾರೆ” ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.
“ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದಿದ್ದರು, ಅಚ್ಛೇ ದಿನ್ ತರುತ್ತೇನೆ ಎಂದಿದ್ದರು. ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ ಎಂದಿದ್ದರು. ಮಾಡಿದರಾ?” ಎಂದು ಪ್ರಶ್ನಿಸಿದರು.
“ಪ್ರಧಾನಿಯಾಗಿ 12 ವರ್ಷಗಳಾಗಿವೆ. ವಿದೇಶದಲ್ಲಿರುವ ಕಪ್ಪುಹಣ ತಂದು ಪ್ರತಿಯೊಬ್ಬರ ಖಾತೆಗೆ ₹15 ಲಕ್ಷ ಹಾಕುತ್ತೇನೆ ಎಂದಿದ್ದರು. ಹಾಕಿದರಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
“ಹಾಗಾದರೆ ಪಾರ್ಲಿಮೆಂಟ್ ಚುನಾವಣೆಯಲ್ಲಿ ಬಿಜೆಪಿಗೆ ಏಕೆ ಮತ ಹಾಕಬೇಕು? ಜನರಿಗೆ ತಪ್ಪು ಮಾಹಿತಿ ನೀಡಿ ತಪ್ಪು ದಾರಿಗೆ ಎಳೆದಿದ್ದಾರೆ” ಎಂದು ಅವರು ಆರೋಪಿಸಿದರು.