ಸಿದ್ದರಾಮಯ್ಯ ವೇಸ್ಟ್ ಬಾಡಿ – ಏಕವಚನದಲ್ಲೇ ರಮೇಶ್ ಜಾರಕಿಹೊಳಿ ವಾಗ್ದಾಳಿ…

77
firstsuddi

ಬೆಳಗಾವಿ : ಸಿದ್ದರಾಮಯ್ಯ ಒಬ್ಬ ವೇಸ್ಟ್ ಬಾಡಿ ಎಂದ ರಮೇಶ್ ಜಾರಕಿಹೊಳಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಭಯ ಹುಟ್ಟಿದೆ. ಸಿದ್ದರಾಮಯ್ಯರದ್ದು ಮುಗಿದ ಕಥೆ, ಮುಂದಿನ ಬಾರಿ ಸೋಲ್ತಾನೆ ಎಂದು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಗೋಕಾಕ್ ನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷ ಸೋಲಬಾರದಿತ್ತು ಸೋತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ. ಹೀಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಮ್ಮ ಪಕ್ಷದಲ್ಲಿ ಎನಾಗಿದೆ ಎನಿಲ್ಲ ಎಂಬುದು ನಮ್ಮ ವರಿಷ್ಠರ ಜತೆಗೆ ಮಾತನಾಡಿದ್ದೇನೆ. ಯಾಕೆ ಸೋತಿದೆ ಎಂಬುದು ಚರ್ಚೆ ಮಾಡಿ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದರು.

ನಾನು ಕಾಂಗ್ರೆಸ್ ಸೋಲಿಸುತ್ತೇನೆ ಅಂತಾ ಹಠಕ್ಕೆ ಬಿದ್ದಿದ್ದು ನಿಜ. ಇವತ್ತು ಅವರ ಪಕ್ಷ ಗೆದ್ದಿದೆ ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಎಲ್ಲಿ ತಪ್ಪಿದೆ ಎಂಬುದು ಆಂತರಿಕವಾಗಿ ಚರ್ಚೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಡಿಕೆಶಿ ಹೇಳಿಕೆ ಬಗ್ಗೆಯೂ ಕಠೋರವಾಗಿ ಮಾತನಾಡುತ್ತೇನೆ ಎಂದು ಹೇಳಿದರು.