ಮಂಡ್ಯ : ವೈಯಕ್ತಿಕ ಕಾರಣಗಳಿಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ.
ರಾಮಕೃಷ್ಣ(25) ಆತ್ಮಹತ್ಯೆ ಮಾಡಿಕೊಂಡ ಯುವಕ . ಈತ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದನು. ಮೊನ್ನೆ ಕೆಲಸ ಮುಗಿಸಿಕೊಂಡು ಬಂದಿದ್ದ ಯುವಕ ನಿನ್ನೆ ರಜೆ ಹಾಕಿ ಮನೆಯಲ್ಲೇ ಇದ್ದ. ಆದರೆ ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸಾಯುವ ಮುನ್ನ ರಾಮಕೃಷ್ಣ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರು ನನ್ನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿಕೊಳ್ಳುವ ಮೂಲಕ ತನ್ನ ಕೊನೆಯ ಆಸೆಯನ್ನು ಹೇಳಿಕೊಂಡಿದ್ದಾನೆ. ಅಭಿಮಾನಿಯ ಈ ಕೋರಿಕೆಯನ್ನು ಈಡೇರಿಸಲು ಸಿದ್ದರಾಮಯ್ಯ ಅವರು ಇಂದು ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.










