ಸಿಲಿಂಡರ್ ಸ್ಫೋಟ ; ಏಳು ಮಂದಿ ದುರ್ಮರಣ…

81
firstsuddi

ಗಾಂಧಿನಗರ : ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆದಿದೆ.

ಈ ಘಟನೆ ಮಂಗಳವಾರ ರಾತ್ರಿ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಮಕ್ಸುದನ್ ಗಢ್ ತಹಸಿಲ್ ನ ಬೆರವಾಸ್ ಗ್ರಾಮದವರಾದ ಮೃತರು, ಗುಜರಾತ್ ನ ಅಹಮದಾಬಾದ್ ಗೆ ಕೆಲಸಕ್ಕೆಬಂದಿದ್ದರು. ಗೋಡಂಬಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಮನೆಯಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಮೂವರು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರಲ್ಲಿ ಮಕ್ಕಳೂ ಇದ್ದಾರೆ ಎಂದು ತಿಳಿದುಬಂದಿದೆ.