ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಸದ್ದು ಮಾಡಿದ ಪೊಲೀಸ್ ರಿವಾಲ್ವರ್…

116
firstsuddi

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದ್ದು, ಹಲವಾರು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ತಲೆಮರಿಸಿಕೊಂಡಿದ್ದ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕಾರ್ತಿಕ್ (21) ಬಂಧಿತ ಆರೋಪಿ ಎಂದು ಗುರುತಿಸಲಾಗಿದ್ದು, 15ಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿ ಇಂದು ಬೆಳಿಗ್ಗೆ ಶ್ರೀರಾಂಪುರದ ಬಳಿ ಓಡಾಡುತ್ತಿರುವ ಬಗ್ಗೆ ಮಾಹಿತಿ ತಿಳಿದು ನಂದಿನಿ ಲೇಔಟ್‍ನ ಸಬ್ ಇನ್‍ಸ್ಪೆಕ್ಟರ್ ನಿತ್ಯಾನಂದಾಚಾರಿ ಅವರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಲು ಮುಂದಾಗಿದ್ದು, ಈ ವೇಳೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪಿಎಸ್‍ಐ ನಿತ್ಯಾನಂದಾಚಾರಿ ಅವರು ತಮ್ಮ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ.