ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ರಿವಾಲ್ವರ್ ಸದ್ದು ಮಾಡಿದ್ದು, ಕೊಲೆಗೆ ಸುಪಾರಿ ಪಡೆದಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದು, ಬಳಿಕ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಬಾಬು ಎಂಬುವವರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿ ಬಾಬು ನಂದಿನಿ ಲೇಔಟ್ ವ್ಯಾಪ್ತಿಯಲ್ಲಿ ರಘು ಎಂಬುವವರನ್ನು ಕೊಲೆ ಮಾಡಿದ್ದರು. ಈ ಕುರಿತು ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ವಾಸವಾಗಿದ್ದ ಆರೋಪಿ ಬಾಬುವನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಗ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾಗಿದ್ದು, ಈ ವೇಳೆ ನಂದಿನಿ ಲೇಔಟ್ನ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆರೋಪಿ ಬಾಬು ಕಾಲಿಗೆ ಗುಂಡನ್ನು ಹಾರಿಸಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.










