ಸಿಲಿಕಾನ್ ಸಿಟಿಯಲ್ಲಿ ಭೀಕರ ರಸ್ತೆ ಅಪಘಾತ – ಪ್ರಾಣಾಪಾಯದಿಂದ ಪಾರು…

68
firstsuddi

ಬೆಂಗಳೂರು : ನಗರದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮಡಿವಾಳದ ಸೆಂಟ್ ಜಾನ್ ಆಸ್ಪತ್ರೆ ಸಿಗ್ನಲ್ ಬಳಿ ಘಟನೆ ನಡೆದಿದ್ದು, ಬಲೆನೊ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಸಂಫೂರ್ಣ ನಜ್ಜುಗುಜ್ಜಾಗಿದೆ. ಆದರೆ ಇಬ್ಬರಿಗೂ ಒಂದು ಸಣ್ಣ ಗಾಯವೂ ಆಗಿಲ್ಲ. ಮುಂಭಾಗದಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿ ಬಿಯರ್ ಬಾಟಲ್ ಪತ್ತೆಯಾಗಿದ್ದು, ವಿದ್ಯಾರ್ಥಿಗಳ ವಿರುದ್ಧ ಡ್ರಿಂಕ್ಸ್ ಆಂಡ್ ಡ್ರೈವ್ ಕೇಸ್ ಪ್ರಕರಣ ದಾಖಲಿಸಿದ್ದಾರೆ.