ಬೆಂಗಳೂರು : ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದಂದು ಕನ್ನಡದಲ್ಲಿ ಮೊತ್ತ ಮೊದಲ ಬಾರಿಗೆ ಸುದೀಪ್ ಅವರ ಬಯೋಗ್ರಫಿ ಆಡಿಯೋ ಮತ್ತು ಇ ಬುಕ್ ಆಗಿ ಬಿಡುಗಡೆ ಆಗುತ್ತಿದೆ.
ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದ ‘ಕನ್ನಡ ಮಾಣಿಕ್ಯ ಕಿಚ್ಚ’ ಹೆಸರಿನ ಪುಸ್ತಕ ಕಳೆದ ವರ್ಷ ಬಿಡುಗಡೆಯಾಗಿ ದಾಖಲೆ ರೀತಿಯಲ್ಲಿ ಮಾರಾಟವಾಗಿತ್ತು. ಈ ಪುಸ್ತಕವೇ ಇಂದು ಮೈ ಲ್ಯಾಂಗ್ ಆಪ್ ಮೂಲಕ, ಕಿಚ್ಚ ಸುದೀಪ್ ಜನ್ಮದಿನದಂದು (ಸೆಪ್ಟೆಂಬರ್ 2) ಆಡಿಯೋ ಬಯೋಗ್ರಫಿ ಮತ್ತು ಇ ಬುಕ್ ರೂಪದಲ್ಲಿ ಹೊರ ಬರುತ್ತಿದೆ.
ಬಿಗ್ ಬಾಸ್ ಖ್ಯಾತಿಯ ನಟ ಚಂದನ್ ಆಚಾರ್ ಈ ಪುಸ್ತಕಕ್ಕೆ ಧ್ವನಿ ನೀಡಿದ್ದು, ಸುದೀಪ್ ಅವರ ಬದುಕಿನ ಅನೇಕ ಘಟನೆಗಳನ್ನು ಮನಸೆಳೆಯುವಂತೆ ಓದಿದ್ದಾರೆ. ಬೆಂಗಳೂರಿನ ಕಾಯಕ ಪ್ರಕಾಶನ ಹೊರತಂದ ಈ ಕೃತಿಯು ಬಿಡುಗಡೆಯಾದ ಎರಡನೇ ದಿನಕ್ಕೆ ಮರುಮುದ್ರಣಗೊಂಡಿತ್ತು. ಆಡಿಯೋ ಮತ್ತು ಇ ಪುಸ್ತಕಕ್ಕಾಗಿ www.mylang.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.










